Hari Kathamruta sara kanda Narasimha — КиберПедия 

Общие условия выбора системы дренажа: Система дренажа выбирается в зависимости от характера защищаемого...

История создания датчика движения: Первый прибор для обнаружения движения был изобретен немецким физиком Генрихом Герцем...

Hari Kathamruta sara kanda Narasimha

2022-11-27 27
Hari Kathamruta sara kanda Narasimha 0.00 из 5.00 0 оценок
Заказать работу

narsimha-in-hari-kathamruta-saara (Kannada)

 

Harikathamrutasara gurugala

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು ॥


Mangalacharana sandhi

ಶ್ರೀರಮಣಿ ಕರಕಮಲ ಪೂಜಿತ ಚಾರುಚರಣ ಸರೋಜ
ಬ್ರಹ್ಮ ಸಮೀರವಾಣಿ ಫಣೀಂದ್ರವೀಂದ್ರ ಭವ ಇಂದ್ರ ಮುಖ ವಿನುತ
ನೀರಜಭವಾಂಡ ಉದಯ ಸ್ಥಿತಿ ಕಾರಣನೆ ಕೈವಲ್ಯದಾಯಕ
ನಾರಸಿಂಹನೆ ನಮಿಪೆ ಕರುಣಿಪುದು ಎಮಗೆ ಮಂಗಳವ ॥1॥

 

Karuna sandhi

ಮೀನಕೂರ್ಮ ವರಾಹ ನರಪಂಚಾನನ ಅತುಳ ಶೌರ್ಯ
ವಾಮನ ರೇಣುಕಾತ್ಮಜ ರಾವಣಾದಿನಿಶಾಚರಧ್ವಂಸಿ
ಧೇನುಕಾಸುರಮಥನ ತ್ರಿಪುರವ ಹಾನಿಗೈನಿಸಿದ ನಿಪುಣ
ಕಲಿಮುಖ ದಾನವರ ಸಂಹರಿಸಿ ಧರ್ಮದಿ ಕಾಯ್ದ ಸುಜನರನಾ ॥30॥

 

Vyapti sandhi

ಎಲ್ಲರೊಳು ತಾನಿಪ್ಪ ತನ್ನೊಳಗೆ ಎಲ್ಲರನು ಧರಿಸಿಹನು
ಅಪ್ರತಿಮಲ್ಲ ಮನ್ಮಥಜನಕ ಜಗದ ಆದಿ ಅಂತ ಮಧ್ಯಗಳ ಬಲ್ಲ
ಬಹುಗುಣ ಭರಿತ ದಾನವ ದಲ್ಲಣ ಜಗನ್ನಾಥ ವಿಠಲ
ಸೊಲ್ಲು ಲಾಲಿಸಿ ಸ್ತಂಭದಿಂದಲಿ ಬಂದ ಭಕುತನಿಗೆ ॥32॥

 

Bhojana rasa vibhaga sandhi

ಕಪಿಲ ನರಹರಿ ಭಾರ್ಗವತ್ರಯ ವಪುಷ ನೇತ್ರದಿ ನಾಸಿಕಾಸ್ಯದಿ
ಶಫರನಾಮಕ ಜಿಹ್ವೆಯಲಿ ದಂತದಲಿ ಹಂಸಾಖ್ಯ
ತ್ರಿಪದಿಪಾದ್ಯ ಹಯಾಸ್ಯ ವಾಚ್ಯದೊಳು ಅಪರಿಮಿತ ಸುಖಪೂರ್ಣ ಸಂತತ ಕೃಪಣರೊಳಗಿದ್ದು
ಅವರವರ ರಸ ಸ್ವೀಕರಿಸಿ ಕೊಡುವ ॥7॥

 

Pancha mahayaj~ja sandhi

ಯುಗ ಚತುಷ್ಟಯಗಳಲಿ ತಾನಿದ್ದು ಯುಗ ಪ್ರವರ್ತಕ ಧರ್ಮ ಕರ್ಮಗಳಿಗೆ ಪ್ರವರ್ತಕ
ವಾಸುದೇವಾದಿ ಈರೆರೆಡು ರೂಪ ತೆಗೆದುಕೊಂಡು
ಯುಗಾದಿ ಕೃತು ತಾ ಯುಗ ಪ್ರವರ್ತಕಯೆನಿಸಿ
ಧರ್ಮ ಪ್ರಘಟಕನು ತಾನಾಗಿ ಭಕುತರಿಗೀವ ಸಂಪದವ ॥15॥

 

Pancha mahayaj~ja sandhi

ನೆಲದೊಳು ಇಪ್ಪನು ಕೃಷ್ಣ ರೂಪದಿ ಜಲದೊಳು ಇಪ್ಪನು ಹರಿಯೆನಿಸಿ
ಶಿಖಿಯೊಳಗೆ ಇಪ್ಪನು ಪರಶುರಾಮ ಉಪೆನ್ದ್ರನು ಎಂದೆನಿಸಿ ಎಲ್ಲರೊಳು ಇಪ್ಪನು ಜನಾರ್ಧನನು
ಬಾಂದಲದೊಳು ಅಚ್ಯುತ ಗಂಧ ನರಹರಿ
ಪೊಳೆವ ಅಧೋಕ್ಷಜ ರಸಗಳೊಳು ರಸರೂಪ ತಾನಾಗಿ ॥20॥

 

Pancha mahayaj~ja sandhi

ಮನದೊಳು ಅಹಂಕಾರದೊಳು ಚಿಂತನೆಯ ಮಾಳ್ಪುದು ಅಂತರಾತ್ಮನ
ಘನ ಸುತತ್ತ್ವದಿ ಪರಮನ ಅವ್ಯಕ್ತದಲಿ ಜ್ಞಾನಾತ್ಮ
ಇನಿತು ಪಂಚಾಶಯ್ವರಣ ವೇದ್ಯನ ಅಜಾದ್ಯೈವತ್ತು ಮೂರ್ತಿಗಳನು
ಸದಾ ಸರ್ವತ್ರ ದೇಹಗಳಲ್ಲಿ ಪೂಜಿಪುದು ॥26॥

 

Pancha mahayaj~ja sandhi

ಕೇಶವಾದಿ ಸುಮೂರ್ತಿ ದ್ವಾದಶ ಮಾಸ ಪುಂಡ್ರಗಳಲ್ಲಿ
ವೇದವ್ಯಾಸ ಅನಿರುದ್ಧಾದಿ ರೂಪಗಳು ಆರು ಋತುಗಳಲಿ
ವಾಸವಾಗಿಹನೆಂದು ತ್ರಿಂಶತಿ ವಾಸರದಿ ಸತ್ಕರ್ಮ ಧರ್ಮ ನಿರಾಶೆಯಿಂದಲಿ ಮಾಡು
ಕರುಣವ ಬೇಡು ಕೊಂಡಾಡು ॥28॥

 

Pancha mahayaj~ja sandhi

ಮೂಲರೂಪನು ಮನದೊಳಿಹ ಶ್ರವಣ ಆಲಿಯೊಳಗಿಹ ಮತ್ಸ್ಯ
ಕೂರ್ಮನು ಕೋಲರೂಪನು ತ್ವಕ್ರಸನದೊಳಗೆ ಇಪ್ಪ ನರಸಿಂಹ
ಬಾಲವಟು ವಾಮನನು ನಾಸಿಕ ನಾಳದೊಳು ವದನದಲಿ ಭಾರ್ಗವ
ವಾಲಿಭಂಜನ ಹಸ್ತದೊಳು ಪಾದ ಶ್ರೀ ಕೃಷ್ಣ ॥34॥

 

Pancha tanmatra sandhi

ಪ್ರಣವ ಪ್ರತಿಪಾದ್ಯ ತ್ರಿನಾಮದಿ ತನುವಿನೊಳು ತ್ರಿಸ್ಥಾನಗ ಅನಿರುದ್ಧನು
ತ್ರಿಪಂಚಕ ಏಕ ವಿಂಶತಿ ಚತುರ ವಿಂಶತಿಗನು ಎನಿಸಿ
ಎಪ್ಪತ್ತೆರಡು ಸಾವಿರ ಇನಿತು ನಾಡಿಗಳೊಳು ನಿಯಾಮಿಸುತ ಇನ ಭಸ್ತಿಗ
ಲೋಕದೊಳು ಸರ್ವತ್ರ ಬೆಳಗುವನು ॥2॥

 

Pancha tanmatra sandhi

ಮತ್ತೆ ಚಿತ್ದೇಹದೊಳಗೆ ಎಂಭತ್ತು ಸಾವಿರದ ಏಳು ನೂರ ಇಪ್ಪತ್ತೈದು
ನರಸಿಂಹ ರೂಪದಲಿದ್ದು
ಜೀವರಿಗೆ ನಿತ್ಯದಲಿ ಹಗಲು ಇರಲು ಬಪ್ಪ ಅಪಮೃತ್ಯುವಿಗೆ ತಾ ಮೃತ್ಯುವೆನಿಸುವ
ಭೃತ್ಯ ವಾತ್ಸಲ ಭಯವಿನಾಶನ ಭಾಗ್ಯ ಸಂಪನ್ನ ॥15॥

 

Pancha tanmatra sandhi

ಜ್ವರನೊಳು ಇಪ್ಪತ್ತೇಳು ಹರನೊಳಗೆ ಇರುವನು ಇಪ್ಪತ್ತೆಂಟು ರೂಪದಿ
ಎರಡು ಸಾವಿರದ ಎಂಟು ನೂರಿಪ್ಪತ್ತೇಳು ಅಧಿಕ ಜ್ವರಹರ ಆಹ್ವಯ
ನಾರಸಿಂಹನ ಸ್ಮರಣೆಮಾತ್ರದಿ ದುರಿತ ರಾಶಿಗಳು ಇರದೇ ಪೋಪವು
ತರಣಿ ಬಿಂಬವ ಕಂಡ ಹಿಮದಂತೆ ॥16॥

 

Pancha tanmatra sandhi

ಮಾಸ ಪರಿಯಂತರವು ಬಿಡದೆ ನೃಕೇಸರಿಯ ಶುಭನಾಮ ಮಂತ್ರ
ಜಿತಾಸನದಲಿ ಏಕಾಗ್ರ ಚಿತ್ತದಿ ನಿಷ್ಕಪಟದಿಂದ ಬೇಸರದೆ ಜಪಿಸಲು
ವೃಜಿನಗಳ ನಾಶಗೈಸಿ
ಮನೋರಥಗಳ ಪರೇಶ ಪಾರ್ಟಿಯ ಮಾಡಿ ಕೊಡುವನು ಕಡೆಗೆ ಪರಗತಿಯ ॥17॥

 

Pancha tanmatra sandhi

ವಾರಿಜಭವಾಂಡದೊಳು ಲಕ್ಷ್ಮೀನಾರಸಿಂಹನ ರೂಪಗುಣಗಳು
ವಾರಿಧಿಯೊಳಿಹ ತೆರಗಳಂದದಿ ಸಂದಣಿಸಿ ಇಹವು
ಕಾರಣಾoಶಾವೇಶ ವ್ಯಾಪ್ತಾವತಾರ ಕಾರ್ಯಾವ್ಯಕ್ತವ್ಯಕ್ತವು
ಈರೈದು ವಿಭೂತಿ ಅಂತರ್ಯಾಮಿ ರೂಪಗಳು ॥27॥

 

Matruka sandhi

ರೋಮಗಳಲಿ ವಸಂತ ತ್ರಿಕಕುದ್ಧಾಮ ಮುಖದೊಳಗೆ ಅಗ್ನಿ ಭಾರ್ಗವ
ತಾಮರಸ ಭವ ವಾಸುದೇವರು ಮಸ್ತಕದೊಳಿಹರು
ಈ ಮನದೊಳಿಹ ವಿಷ್ಣು ಶಿಖದೊಳು ಉಮಾಮಹೇಶ್ವರ ನಾರಸಿಂಹಸ್ವಾಮಿ
ತನ್ನ ಅನುದಿನದಿ ನೆನೆವರ ಮೃತ್ಯು ಪರಿಹರಿಪ ॥16॥

 

Udattanudatta sandhi

ವಾಸವಾನುಜ ರೇಣುಕಾತ್ಮಜ ದಾಶರಥಿ ವೃಜಿನ ಅರ್ದನ ಅಮಲ ಜಲಾಶಯ ಆಲಯ
ಹಯವದನ ಶ್ರೀಕಪಿಲ ನರಸಿಂಹ
ಈ ಸುರೂಪದಿ ಅವರವರ ಸಂತೋಷ ಬಡಿಸುತ ನಿತ್ಯ ಸುಖಮಯ
ವಾಸವಾಗಿಹ ಹೃತ್ಕಮಲದೊಳು ಬಿಂಬನು ಎಂದೆನಿಸಿ ॥21॥

 

Udattanudatta sandhi

ನಾರಸಿಂಹ ಸ್ವರೂಪದೊಳಗೆ ಶರೀರ ನಾಮದಿ ಕರೆಸುವನು
ಹದಿನಾರು ಕಳೆಗಳು ಉಳ್ಳ ಲಿಂಗದಿ ಪುರುಷ ನಾಮಕನು
ತೋರುವನು ಅನಿರುದ್ಧದೊಳು ಶಾಂತೀರಮಣ ಅನಿರುದ್ಧ ರೂಪದಿ
ಪ್ರೇರಿಸುವ ಪ್ರದ್ಯುಮ್ನ ಸ್ಥೂಲ ಕಳೇವರದೊಳಿದ್ದು ॥26॥

 

Sarva pratika sandhi

ವನಚರ ಅದ್ರಿ ಧರಾ ಧರನೆ ಜಯ ಮನುಜ ಮೃಗವರ ವೇಷ ಜಯ
ವಾಮನ ತ್ರಿವಿಕ್ರಮ ದೇವ ಜಯ ಭೃಗು ರಾಮ ಭೂಮ ಜಯ
ಜನಕಜಾ ವಲ್ಲಭನೆ ಜಯ ರುಗ್ಮಿಣಿ ಮನೋರಥ ಸಿದ್ಧಿದಾಯಕ
ಜಿನ ವಿಮೋಹಕ ಕಲಿವಿದಾರಣ ಜಯ ಜಯಾರಮಣ ॥24॥

 

Nama smarana sandhi

ಅಪರಿಮಿತ ಸನ್ಮಹಿಮ ನರಹರಿ ವಿಪಿನದೊಳು ಸಂತೈಸುವನು
ಕಾಶ್ಯಪಿಯನು ಅಳಿದವ ಸ್ಥಳಗಳಲಿ ಸರ್ವತ್ರ ಕೇಶವನು
ಖಪತಿ ಗಗನದಿ ಜಲಗಳಲಿ ಮಹ ಶಫರನಾಮಕ
ಭಕ್ತರನು ನಿಷ್ಕಪಟದಿಂದಲಿ ಸಲಹುವನು ಕರುಣಾಳು ದಿನದಿನದಿ ॥26॥

 

Pitrugana sandhi

ಮೂರು ಯುಗದಲಿ ಮೂಲ ರೂಪನು ಸೂರಿಗಳ ಸಂತೈಸಿ
ದಿತಿಜ ಕುಮಾರಕರ ಸಂಹರಿಸಿ ಧರ್ಮವನು ಉಳುಹಬೇಕೆಂದು
ಕಾರುಣಿಕ ಭೂಮಿಯೊಳು ನಿಜ ಪರಿವಾರ ಸಹಿತ ಅವತರಿಸಿ
ಬಹು ವಿಧ ತೋರಿದನು ನರವತ್ ಪ್ರವೃತ್ತಿಯ ಸಕಲ ಚೇತನಕೆ ॥19॥

 

Pitrugana sandhi

ನಳಿನ ಮಿತ್ರಗೆ ಇಂದ್ರಧನು ಪ್ರತಿ ಫಲಿಸುವಂತೆ
ಜಗತ್ರಯವು ಕಂಗೊಳಿಪುದು ಅಣು ಉಪಾಧಿಯಲಿ ಪ್ರತಿಬಿಂಬ ಅಹ್ವಯದಿ ಹರಿಗೆ
ತಿಳಿಯೆ ತ್ರಿಕಕುದ್ಧಾಮನ ಅತಿ ಮಂಗಳ ಸುರೂಪವ
ಸರ್ವ ಟಾವಿಲಿ ಪೊಳೆವ ಹೃದಯಕೆ ಪ್ರತಿದಿವಸ ಪ್ರಹ್ಲಾದ ಪೋಷಕನು ॥27॥

 

Shvasa sandhi

ಪಾದವು ಎನಿಪವು ವಾಗ್ಮನಃಮಯ ಪಾದರೂಪ ದ್ವಯಗಳೊಳು
ಪ್ರಹ್ಲಾದ ಪೋಷಕ ಸಂಕರುಷಣಾಹ್ವಯದಿ ನೆಲೆಸಿದ್ದು
ವೇದ ಶಾಸ್ತ್ರ ಪುರಾಣಗಳ ಸಂವಾದ ರೂಪದಿ ಮನನಗೈವುತ
ಮೋದಮಯ ಸುಖವಿತ್ತು ಸಲಹುವ ಸರ್ವ ಸಜ್ಜನರ ॥14॥

 

Bhaktaparadhasahishnu sandhi

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು ॥

 

ಶ್ರೀ ಲಕುಮಿವಲ್ಲಭಗೆ ಸಮ ಕರುಣಾಳುಗಳ ನಾಕಾಣೆನೆಲ್ಲಿ
ಕುಚೇಲನ ಅವಲಿಗೆ ಮೆಚ್ಚಿ ಕೊಟ್ಟನು ಸಕಲ ಸಂಪದವ
ಕೇಳಿದಾಕ್ಷಣ ವಸ್ತ್ರಗಳ ಪಾಂಚಾಲಿಗಿತ್ತನು
ದೈತ್ಯನುದರವ ಸೀಳಿ ಸಂತೈಸಿದನು ಪ್ರಹ್ಲಾದನ ಕೃಪಾಸಾಂದ್ರ ॥1॥

 

Bhaktaparadhasahishnu sandhi

ಶ್ರೀ ವಿರಿಂಚಾದಿ ಅಮರನುತ ನಾನಾವತಾರವ ಮಾಡಿ ಸಲಹಿದ
ದೇವತೆಗಳನು ಋಷಿಗಳನು ಕ್ಷಿತಿಪರನು
ಮಾನವರ ಸೇವೆಗಳ ಕೈಕೊಂಡು ಫಲಗಳನೀವ
ನಿತ್ಯಾನಂದಮಯ ಸುಗ್ರೀವ ಧ್ರುವ ಮೊದಲಾದ ಭಕ್ತರಿಗಿತ್ತ ಪುರುಷಾರ್ಥ ॥10॥

 

Bruhattaratamya/aveshavatara sandhi

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು ॥

 

ಹರಿ ಸಿರಿ ವಿರಂಚೀರ ಮುಖ ನಿರ್ಜನರ ಆವೇಶಾವತಾರಗಳ
ಸ್ಮರಿಸು ಗುಣಗಳ ಸರ್ವ ಕಾಲದಿ ಭಕ್ತಿ ಪೂರ್ವಕದಿ ॥

 

ಮೀನ ಕೂರ್ಮ ಕ್ರೋಡ ನರಹರಿ ಮಾಣವಕ ಭೃಗುರಾಮ ದಶರಥ ಸೂನು
ಯಾದವ ಬುದ್ಧ ಕಲ್ಕೀ ಕಪಿಲ ವೈಕುಂಠ
ಶ್ರೀನಿವಾಸ ವ್ಯಾಸ ಋಷಭ ಹಯಾನನಾ ನಾರಾಯಣೀ ಹಂಸ ಅನಿರುದ್ಧ
ತ್ರಿವಿಕ್ರಮ ಶ್ರೀಧರ ಹೃಷೀಕೇಶ ॥1॥

 

Bruhattaratamya / aveshavatara sandhi

ನರಹರಿ ಈರ ಆವೇಶ ಸಂಯುತ ನರಪುರಂದರಗಾಧಿ ಕುಶ
ಮಂದರದ್ಯುಮ್ನ ವಿಕುಕ್ಷಿ ವಾಲೀ ಇಂದ್ರನ ಅವತಾರ
ಭರತ ಬ್ರಹ್ಮಾವಿಷ್ಟ ಸಾಂಬ ಸುದರ್ಶನ ಪ್ರದ್ಯುಮ್ನ
ಸನಕಾದ್ಯರೊಳಗಿಪ್ಪ ಸನತ್ಕುಮಾರನು ಷನ್ಮುಕನು ಕಾಮ ॥14॥

 

Kalpasadhana sandhi

ಅಪಚಯಗಳಿಲ್ಲ ಉಂಡುದುದರಿಂದ ಉಪಚಯಗಳಿಲ್ಲ
ಅಮರಗಣದೊಳಗೆ ಉಪಮರೆನಿಸುವರಿಲ್ಲ ಜನ್ಮಾದಿಗಳು ಮೊದಲಿಲ್ಲ
ಅಪರಿಮಿತ ಸನ್ಮಹಿಮ ಭಕ್ತರ ಅಪುನರಾವರ್ತರನು ಮಾಡುವ
ಕೃಪಣ ವತ್ಸಲ ಸ್ವಪದ ಸೌಖ್ಯವನಿತ್ತು ಶರಣರಿಗೆ ॥52॥

 

Arohana taratamya sandhi

ತಾರತಮ್ಯ ಆರೋಹಣವ ಬರೆದು ಆರು ಪಠಿಸುವರೋ ಅವರ
ಲಕ್ಷ್ಮೀ ನಾರಸಿಂಹ ಸಮಸ್ತ ದೇವ ಗಣ ಅಂತರಾತ್ಮಕನು
ಪೂರೈಸುವ ಮನೋರಥಂಗಳ ಕಾರುಣಿಕ ಕೈವಲ್ಯ ದಾಯಕ
ದೂರಗೈಪ ಸಮಸ್ತ ದುರಿತವ ವೀತ ಶೋಕ ಸುಖ ॥16॥

 

Naivedya samarpana sandhi

ನಾಲಿಗಿಂದಲಿ ಸ್ವೀಕರಿಪ ರಸಪಾಲು ಮೊದಲಾದ ಅದರೊಳಗೆ
ಘೃತ ತೈಲ ಪಕ್ವ ಪದಾರ್ಥದೊಳಗಿಹ ಚಂದ್ರನಂದನನ
ಪಾಲಿಸುವ ಅಧೋಕ್ಷಜನ ಚಿಂತಿಸು
ಸ್ಥೂಲ ಕೂಷ್ಮಾಂಡ ತಿಲ ಮಾಷಜ ಈ ಲಲಿತ ಭಕ್ಷ್ಯದೊಳು ದಕ್ಷನು ಲಕ್ಷ್ಮೀ ನರಸಿಂಹ ॥19॥

 

Kaksha taratamya sandhi

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ
ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು ॥

 

ಶ್ರೀರಮಣ ಸರ್ವೇಶ ಸರ್ವಗ ಸಾರಭೋಕ್ತ ಸ್ವತಂತ್ರ
ದೋಷ ವಿದೂರ ಜ್ಞಾನಾನಂದ ಬಲೈಶ್ವರ್ಯ ಸುಖ ಪೂರ್ಣ
ಮೂರುಗುಣ ವರ್ಜಿತ ಸಗುಣ ಸಾಕಾರ ವಿಶ್ವ ಸ್ಥಿತಿ ಲಯೋದಯ ಕಾರಣ
ಕೃಪಾಸಾಂದ್ರ ನರಹರೆ ಸಲಹೊ ಸಜ್ಜನರ ॥1॥

 

Kaksha taratamya sandhi

ಓದಿಸುವ ಗುರುಗಳನು ಜರಿದು ಸಹ ಓದುಗರಿಗೆ ಉಪದೇಶಿಸಿದ
ಮಹದಾದಿ ಕಾರಣ ಸರ್ವಗುಣ ಸಂಪೂರ್ಣ ಹರಿಯೆಂದು ವಾದಿಸುವ
ತತ್ಪತಿಯ ತೋರೆಂದು ಆ ದನುಜ ಬೆಸಗೊಳಲು
ಸ್ತಂಭದಿ ಶ್ರೀದನ ಆಕ್ಷಣ ತೋರಿಸಿದ ಪ್ರಹ್ಲಾದ ಸಲಹೆಮ್ಮ ॥34॥

 

Kaksha taratamya sandhi

ಜಯಜಯತು ತ್ರಿಜಗದ್ವಿಲಕ್ಷಣ ಜಯಜಯತು ಜಗದೇಕ ಕಾರಣ
ಜಯಜಯತು ಜಾನಕೀ ರಮಣ ನಿರ್ಗತ ಜರಾಮರಣ
ಜಯಜಯತು ಜಾಹ್ನವೀ ಜನಕ ಜಯಜಯತು ದೈತ್ಯ ಕುಲಾಂತಕ
ಭವಾಮಯ ಹರ ಜಗನ್ನಾಥ್ ವಿಠಲ ಪಾಹಿಮಾಂ ಸತತ ॥56॥

 

Phala shruti (dhira vittala)

 

Guru madhvaru tantrasaradhi

eradadhika muvattu akshara

narasimhana mantra sarare aritu guruvaryara

iruruvudashte sandhi namava

harikathamrutadali unisire

 

Hari kathamruta saara Phala sruthi sandhi

 

ಶ್ರೀ ಜಗನ್ನಾಥ ದಾಸಾರ್ಯರ ಪರಮ ಮುಖ್ಯ

ಶಿಷ್ಯರಾದ ಶ್ರೀ ಶ್ರೀದವಿಠಲರು (ಕರ್ಜಿಗಿ ದಾಸರಾಯರು) ರಚಿಸಿದ ಶ್ರೀ ಫಲಶ್ರುತಿ ಸಂಧಿ

 

ಹರಿಕಥಾಮೃತಸಾರ ಗುರುಗಳ ಕರುಣದಿಂದಾಪನಿತು ಕೇಳುವೆ

ಪರಮ ಭಗವದ್ಭಕ್ತರು ಇದನಾದರದಿ ಕೇಳುವುದು ॥

 

ಹರಿಕಥಾಮೃತಸಾರ ಶ್ರೀಮದ್ಗುರುವರ
ಜಗನ್ನಾಥ ದಾಸರ ಕರತಲಾಮಲಕವನೆ
ಪೇಳಿದ ಸಕಲ ಸಂಧಿಗಳ
ಪರಮ ಪಂಡಿತ ಮಾನಿಗಳು
ಮತ್ಸರಿಸಲೆದೆಗಿಚ್ಚಾಗಿ ತೋರುವುದರಿಸಕರಿಗಿದು
ತೋರಿ ಪೇಳುವದಲ್ಲ ಧರೆಯೊಳಗೆ ॥1॥

ಭಾಮಿನೀ ಷಟ್ಪದಿಯ ರೂಪದಲೀ
ಮಹಾದ್ಭುತ ಕಾವ್ಯದಾದಿಯೊಳಾ
ಮನೋಹರ ತರತರಾತ್ಮಕ ನಾಂದಿ ಪದ್ಯಗಳ
ಯಾಮಯಾಮಕೆ ಪಠಿಸುವವರ
ಸುಧಾಮಸ ಕೈಪಿಡಿಯಲೋಸುಗ
ಪ್ರೇಮದಿಂದಲಿ ಪೇಳ್ದ ಗುರು ಕಾರುಣ್ಯಕೇನೆಂಬೆ ॥2॥

ಸಾರವೆಂದರೆ ಹರಿಕಥಾಮೃತ
ಸಾರವೆಂಬುದೆಮ್ಮ ಗುರುವರ
ಸಾರಿದಲ್ಲದೆ ತಿಳಿಯದೆನುತ ಮಹೇಂದ್ರ ನಂದನನ
ಸಾರಥಿಯ ಬಲಗೊಂಡು ಸಾರಾ
ಸಾರಗಳ ನಿರ್ಣೈಸಿ ಪೇಳ್ದನು
ಸಾರ ನಡೆವ ಮಹಾತ್ಮರಿಗೆ ಸಂಸಾರವೆಲ್ಲಿಹುದೋ ॥3॥

ದಾಸವರ್ಯರ ಮುಖದಿ ನಿಂದು
ರಮೇಶನನು ಕೀರ್ತಿಸುವ ಮನದಭಿಲಾಷೆಯಲಿ
ವರ್ಣಾಭಿಮಾನಿಗಳೊಲಿದು ಪೇಳಿಸಿದ
ಈ ಸುಲಕ್ಷಣ ಕಾವ್ಯದೊಳಗ್ಯತಿ
ಪ್ರಾಸಗಳಿಗೆ ಪ್ರಯತ್ನವಿಲ್ಲದೆ
ಲೇಸುಲೇಸನೆ ಶ್ರಾವ್ಯ ಮಾಡುದೆ ಕುರುಹು ಕವಿಗಳಿಗೆ ॥4॥

ಪ್ರಾಕೃತೋಕ್ತಿಗಳೆಂದು ಬರಿದೆ
ಮಹಾಕೃತಘ್ನರು ಜರಿವರಲ್ಲದೆ
ಸ್ವೀಕೃತವ ಮಾಡದಲೆ ಬಿಡುವರೇ ಸುಜನರಾದವರು
ಶ್ರೀಕೃತೀಪತಿ ಅಮಲ ಗುಣಗಳು
ಈ ಕೃತಿಯೊಳುoಟಾದ ಬಳಿಕ
ಪ್ರಾಕೃತವೆ ಸಂಸ್ಕೃತದ ಸಡಗರವೇನು ಸುಜನರಿಗೆ ॥5॥

ಶ್ರುತಿಗೆ ಶೋಭನಮಾಗದಡೆ
ಜಡಮತಿಗೆ ಮಂಗಳವೀಯದಡೆ
ಶ್ರುತಿಸ್ಮ್ರುತಿಗೆ ಸಮ್ಮತವಾಗದಿದ್ದಡೆ ನಮ್ಮ ಗುರುರಾಯ
ಮಥಿಸಿ ಮಧ್ವಾಗಮ ಪಯೋಬ್ಧಿಯ
ಕ್ಷಿತಿಗೆ ತೋರಿದ ಬ್ರಹ್ಮ ವಿದ್ಯಾ
ರತರಿಗೀಪ್ಸಿತ ಹರಿಕಥಾಮೃತಸಾರವೆನಿಸುವುದು ॥6॥

ಭಕ್ತಿವಾದದಿ ಪೇಳ್ದನೆಂಬ
ಪ್ರಸಕ್ತಿ ಸಲ್ಲದು ಕಾವ್ಯದೊಳು ಪುನರುಕ್ತಿ
ಶುಷ್ಕ ಸಮಾನ ಪದ ವ್ಯತ್ಯಾಸ ಮೊದಲಾದ
ಯುಕ್ತಿ ಶಾಸ್ತ್ರ ವಿರುದ್ಧ ಶಬ್ದ
ವಿಭಕ್ತಿ ವಿಷಮಗಳಿರಲು
ಜೀವನ್ಮುಕ್ತ ಭೋಗ್ಯವಿದೆಂದು ಸಿರಿಮದನಂದ ಮೆಚ್ಚುವನೆ? ॥7॥

ಆಶುಕವಿಕುಲ ಕಲ್ಪತರು
ದಿಗ್ದೇಶವರಿಯಲು ರಂಗನೊಲುಮೆಯ
ದಾಸಕೂಟಸ್ಥರಿಗೆರಗಿ ನಾ ಬೇಡಿಕೊಂಬೆನು
ಈ ಸುಲಕ್ಷಣ ಹರಿಕಥಾಮೃತ
ಮೀಸಲರಿಯದೆ ಸಾರದೀರ್ಘ
ದ್ವೇಷಿಗಳಿಗೆರೆಯದಲೆ ಸಲಿಸುವದೆನ್ನ ಬಿನ್ನಪವ ॥8॥

ಪ್ರಾಸಗಳ ಪೊಂದಿಸದೆ ಶಬ್ದ
ಶ್ಲೇಷಗಳ ಶೋಧಿಸದೆ ದೀರ್ಘ
ಹ್ರಾಸಗಳ ಸಲ್ಲಿಸದೆ ಷಟ್ಪದಿಗತಿಗೆ ನಿಲ್ಲಿಸದೆ
ದೂಷಕರು ದಿನದಿನದಿ ಮಾಡುವ
ದೂಷಣೆಯೆ ಭೂಷಣಗಳೆಂದುಪ
ದೇಶಗಮ್ಯವು ಹರಿಕಥಾಮೃತಸಾರ ಸಾಧ್ಯರಿಗೆ ॥9॥

ಅಶ್ರುತಾಗಮ ಇದರ ಭಾವ
ಪರಿಶ್ರಮವು ಬಲ್ಲವರಿಗಾನಂದಾಶ್ರುಗಳ
ಮಳೆಗರೆಸಿ ಮರೆಸುವ ಚಮತ್ಕ್ರುತಿಯ
ಮಿಶ್ರರಿಗೆ ಮರೆ ಮಾಡಿ ದಿವಿಜರ
ಜಸ್ರದಲಿ ಕಾಯ್ದಿಪ್ಪರಿದರೊಳು
ಪಃಶ್ರುತಿಗಳೈತಪ್ಪವೇ ನಿಜ ಭಕ್ತಿ ಉಳ್ಳವರಿಗೆ ॥10॥

ನಿಚ್ಚ ನಿಜಜನ ನೆಚ್ಚ ನೆಲೆಗೊಂಡಚ್ಚ
ಭಾಗ್ಯವು ಪೆಚ್ಚ ಪೇರ್ಮೆಯು
ಕೆಚ್ಚ ಕೇಳ್ವನು ಮೆಚ್ಚ ಮಲಮರ ಮುಚ್ಚಲೆಂದೆನುತ
ಉಚ್ಚವಿಗಳಿಗೆ ಪೊಚ್ಚ ಪೊಸೆದನ
ಲುಚ್ಚರಿಸದೀ ಸಚ್ಚರಿತ್ರೆಯನುಚ್ಚರಿಸೆ
ಸಿರಿವತ್ಸ ಲಾಂಛನ ಮೆಚ್ಚಲೇನರಿದು ॥11॥

ಸಾಧು ಸಭೆಯೊಳು ಮೆರೆಯೆ ತತ್ವ
ಸುಬೋಧ ವೃಷ್ಟಿಯಗರೆಯೆ ಕಾಮಕ್ರೋಧ
ಬೀಜವು ಹುರಿಯೆ ಖಳರದೆ ಬಿರಿಯೆ ಕರಕರಿಯ
ವಾದಿಗಳ ಪಲ್ಮುರಿಯೆ ಪರಮ
ವಿನೋದಿಗಳ ಮೈಮರೆಯಲೋಸುಗ
ಹಾದಿತೋರಿದ ಹಿರಿಯ ಬಹುಚಾತುರ್ಯ ಹೊಸಪರಿಯ ॥12॥

ವ್ಯಾಸತೀರ್ಥರೊಲವೆಯೊ ವಿಠಲೋಪಾಸಕ
ಪ್ರಭುವರ್ಯ ಪುರಂದರದಾಸರಾಯರ
ದಯವೋ ತಿಳಿಯದು ಓದಿ ಕೇಳದಲೆ
ಕೇಶವನ ಗುಣಮಣಿಗಳನು
ಪ್ರಾಣೇಶಗರ್ಪಿಸಿ ವಾದಿರಾಜರ
ಕೋಶಕೊಪ್ಪುವ ಹರಿಕಥಾಮೃತಸಾರ ಪೇಳಿದರು ॥13॥

ಹರಿಕಥಾಮೃತಸಾರ ನವರಸಭರಿತ
ಬಹು ಗಂಭೀರ ರತ್ನಾಕರ
ರುಚಿರ ಶೃಂಗಾರ ಸಾಲಂಕಾರ ವಿಸ್ತಾರ
ಸರಸ ನರ ಕಂಠೀರವಾಖ್ಯಾರ್ಯರ
ಜನಿತ ಸುಕುಮಾರ ಸಾತ್ವೀಕರಿಗೆ
ಪರಮೋದಾರ ಮಾಡಿದ ಮರೆಯದುಪಕಾರ ॥14॥

ಅವನಿಯೊಳು ಜ್ಯೋತಿಷ್ಮತೀ ತೈಲವನು
ಪಾಮರನುಂಡು ಜೀರ್ಣಿಸಲವನೆ
ಪಂಡಿತನೋಕರಿಪವಿವೇಕಿಯಪ್ಪಂತೆ
ಶ್ರವಣ ಮಂಗಳ ಹರಿಕಥಾಮೃತ
ಸವಿದು ನಿರ್ಗುಣಸಾರ ಮಕ್ಕಿಸಲವ
ನಿಪುಣನೈ ಯೋಗ್ಯಗಲ್ಲದೆ ದಕ್ಕಲರಿಯದಿದು ॥15॥

ಅಕ್ಕರದೊಳೀ ಕಾವ್ಯದೊಳೊಂದಕ್ಕರವ
ಬರೆದೋದಿದವ ದೇವರ್ಕಳಿಂ
ದುಸ್ತಜ್ಯನೆನಿಸಿ ಧರ್ಮಾರ್ಥಕಾಮಗಳ
ಲೆಕ್ಕಿಸದೆ ಲೋಕೈಕನಾಥನ
ಭಕ್ತಿ ಭಾಗ್ಯವ ಪಡೆವ ಜೀವನ್ಮುಕ್ತಗಲ್ಲದೆ
ಹರಿಕಥಾಮೃತಸಾರ ಸೊಗಸುವದೆ ॥16॥

ವತ್ತಿಬಹ ವಿಘ್ನಗಳ ತಡೆದಪ
ಮೃತ್ಯುವಿಗೆ ಮರೆಮಾಡಿ ಕಾಲನ
ಭೃತ್ಯರಿಗೆ ಭೀಕರವ ಪುಟ್ಟಿಸಿ ಸಕಲ ಸಿದ್ಧಿಗಳ
ಎತ್ತಿಗೊಳ್ಳಿಸಿ ವನರುಹೇಕ್ಷಣ
ನ್ರುತ್ಯಮಾಡುವವನ ಮನೆಯೊಳು
ನಿತ್ಯಮಂಗಳ ಹರಿಕಥಾಮೃತಸಾರ ಪಠಿಸುವರ ॥17॥

ಆಯುರಾರೋಗ್ಯೈಶ್ವರ್ಯ ಮಾಹಾಯಶೋ
ಧೈರ್ಯ ಬಲ ಸಮ ಸಹಾಯ
ಶೌರ್ಯೋದಾರ್ಯ ಗುಣಗಾಂಭೀರ್ಯ ಮೊದಲಾದ
ಆಯುತಗಳುಂಟಾಗಲೊಂದಧ್ಯಾಯ
ಪಠಿಸಿದ ಮಾತ್ರದಿಂ ಶ್ರವಣೀಯವಲ್ಲದೆ
ಹರಿಕಥಾಮೃತಸಾರ ಸುಜನರಿಗೆ ॥18॥

ಕುರುಡ ಕಂಗಳ ಪಡೆವ ಬಧಿರನಿಗೆರೆಡು
ಕಿವಿ ಕೇಳ್ಬಹವು ಬೆಳೆಯದ
ಮುರುಡ ಮದನಾಕೃತಿಯ ತಾಳ್ವನು ಕೇಳ್ದ ಮಾತ್ರದಲಿ
ಬರಡು ಹೈನಾಗುವದು ಪೇಳ್ದರೆ
ಕೊರಡು ಪಲ್ಲೈಸುವದು ಪ್ರತಿದಿನ
ಹುರುಡಿಲಾದರು ಹರಿಕಥಾಮೃತಸಾರವನು ಪಠಿಸೆ ॥19॥

ನಿರ್ಜರ ತರಂಗಿಣಿಯೊಳನುದಿನ
ಮಜ್ಜನಾದಿ ಸಮಸ್ತ ಕರ್ಮ
ವಿವರ್ಜಿತಾಶಾಪಾಶದಿಂದಲಿ ಮಾಡಿದಧಿಕ ಫಲ
ಹೆಜ್ಜೆಹೆಜ್ಜೆಗೆ ದೊರೆಯದಿಪ್ಪವೆ
ಸಜ್ಜನರು ಶಿರತೂಗುವಂದದಿ

ಘರ್ಜಿಸುತಲೀ ಹರಿಕಥಾಮೃತಸಾರ ಪಠಿಸುವರ ॥20॥

ಸತಿಯರಿಗೆ ಪತಿಭಕುತಿ ಪತ್ನೀವ್ರತ
ಪುರುಷರಿಗೆ ಹರುಷ ನೆಲೆಗೊಂಡತಿ
ಮನೋಹರರಾಗಿ ಗುರು ಹಿರಿಯರಿಗೆ ಜಗದೊಳಗೆ
ಸತತ ಮಂಗಳವೀವ ಬಹು
ಸುಕೃತಿಗಳೆನಿಸುತ ಸುಲಭದಿಂ ಸದ್ಗತಿಯ
ಪಡೆವರು ಹರಿಕಥಾಮೃತಸಾರವನು ಪಠಿಸೆ ॥21॥

ಎಂತು ಬಣ್ಣಿಸಲೆನ್ನಳವೆ
ಭಗವಂತನಮಲ ಗುಣಾನುವಾದಗಳೆಂತು
ಪರಿಯಲಿ ಪೂರ್ಣಬೋಧರ ಮತವ ಪೊಂದಿದರ
ಚಿಂತನಗೆ ಬಪ್ಪಂತೆ ಬಹು ದೃಷ್ಟಾಂತ
ಪೂರ್ವಕವಾಗಿ ಪೇಳ್ದ ಮಹಂತರಿಗೆ
ನರರೆಂದು ಬಗೆವರೆ ನಿರಯ ಭಾಗಿಗಳು ॥22॥

ಮಣಿಖಚಿತ ಹರಿವಾಣದೊಳು ವಾರಣ
ಸುಭೋಜ್ಯ ಪದಾರ್ಥ ಕೃಷ್ಣಾರ್ಪಣವೆನುತ
ಪಸಿದವರಿಗೋಸುಗ ನೀಡುವಂದದಲಿ
ಪ್ರಣತರಿಗೆ ಪೊಂಗನಡ ವರ
ವಾನ್ಗ್ಮಣಿಗಳಿಂ ವಿರಚಿಸಿದ ಕೃತಿಯೊಳುಣಿಸಿ
ನೋಡುವ ಹರಿಕಥಾಮೃತಸಾರ ವನುದಾರ ॥23॥

ದುಷ್ಟರೆನ್ನದೆ ದುರ್ವಿಷಯದಿಂ
ಪುಷ್ಟರೆನ್ನದೆ ಪೂತಕರ್ಮ
ಭ್ರಷ್ಟರೆನ್ನದೆ ಶ್ರೀದವಿಠಲ ವೇಣುಗೋಪಾಲ
ಕೃಷ್ಣ ಕೈಪಿಡಿವನು ಸುಸತ್ಯ
ವಿಶಿಷ್ಟ ದಾಸತ್ವವನು ಪಾಲಿಸಿ
ನಿಷ್ಠೆಯಿಂದಲಿ ಹರಿಕಥಾಮೃತಸಾರ ಪಠಿಸುವರ ॥24॥

 

***


 

திவ்ய பிரபந்தம் - நரசிங்க

тивйа пирапантам - нарачин̇ка

ШРИ НРИСИМХА

В НАЛАЙРА ДИВЬЯ-ПРАБАНДХЕ

Стихи тамильских альваров (избранные пашуры)

Shri Nrisimha in Divya Prabandham

 

Пойгай Альвар – Мудгал Тирувандади: 23, 31, 51, 90

Бхутат Альвар – Ирандам Тиру


Поделиться с друзьями:

Папиллярные узоры пальцев рук - маркер спортивных способностей: дерматоглифические признаки формируются на 3-5 месяце беременности, не изменяются в течение жизни...

Своеобразие русской архитектуры: Основной материал – дерево – быстрота постройки, но недолговечность и необходимость деления...

Автоматическое растормаживание колес: Тормозные устройства колес предназначены для уменьше­ния длины пробега и улучшения маневрирования ВС при...

Организация стока поверхностных вод: Наибольшее количество влаги на земном шаре испаряется с поверхности морей и океанов (88‰)...



© cyberpedia.su 2017-2024 - Не является автором материалов. Исключительное право сохранено за автором текста.
Если вы не хотите, чтобы данный материал был у нас на сайте, перейдите по ссылке: Нарушение авторских прав. Мы поможем в написании вашей работы!

0.077 с.